DAKSHINA KANNADA
ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ನ ಪ್ರಥಮ ದರ್ಜೆ ಕಾಲೇಜು ಮುಚ್ಚದಂತೆ ಕ್ಯಾಂಪಸ್ ಫ್ರಂಟ್ ಒತ್ತಾಯ
ಮಂಗಳೂರು : ಮಂಗಳೂರು ವಿ ವಿ ಕ್ಯಾಂಪಸ್ ನಲ್ಲಿ 2017 ರಲ್ಲಿ ಸ್ಥಾಪನೆಗೊಂಡ ಪ್ರಥಮ ದರ್ಜೆ ಕಾಲೇಜನ್ನು ಆರ್ಥಿಕ ಕಾರಣವಿಟ್ಟು ಮುಚ್ಚಲು ಹೊರಟಿರುವ ಕ್ರಮವನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮಂಗಳೂರು ಜಿಲ್ಲಾ ಸಮಿತಿಯು ಖಂಡಿಸಿದೆ. ಈ ಕಾಲೇಜನ್ನು ಮುಚ್ಚದಂತೆ ಒತ್ತಾಯಿಸಿ ಜಿಲ್ಲಾ ನಿಯೋಗವು ವಿಶ್ವವಿದ್ಯಾನಿಲಯದ ಕುಲಪತಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕೈಗೆಟಕುವ ದರದಲ್ಲಿ ಉತ್ತಮ ಶಿಕ್ಷಣ ದೊರಕಬೇಕು ಎಂಬ ಉದ್ದೇಶದಿಂದ ಅಂದು ಸ್ಥಾಪನೆಗೊಂಡಿರುವ ಈ ಕಾಲೇಜಿನಲ್ಲಿ ಹಲವು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡಿ ತಮ್ಮ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಈ ಕಾಲೇಜಿನಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ವಿ ವಿ ಕ್ಯಾಂಪಸ್ ನಲ್ಲೇ ಉನ್ನತ ಶಿಕ್ಷಣ ಕೂಡ ಪಡೆಯುವ ಅವಕಾಶವಿದೆ. ಇದೀಗ ಕ್ಷುಲ್ಲಕ ಕಾರಣ ಹೇಳಿ ಈ ಕ್ಯಾಂಪಸ್ಸನ್ನು ಮುಚ್ಚಲು ಹೊರಟಿರವುದು ಆಕ್ಷೇಪಾರ್ಹ ಎಂದು ನಿಯೋಗವು ತಿಳಿಸಿತು.
ಇದೀಗ ದಾಖಾಲಾತಿಯನ್ನು ಕೂಡ ನಿಲ್ಲಿಸಿದ್ದು, ಪ್ರಸ್ತುತ ವಿದ್ಯಾಭ್ಯಾಸ ಪಡೆಯತ್ತಿರುವ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳನ್ನು ನಡು ನೀರಿನಲ್ಲಿ ಕೈ ಬಿಡದೆ ವಿಶ್ವವಿದ್ಯಾನಿಲಯವು ಈ ತೀರ್ಮಾನವನ್ನು ಹಿಂಪಡೆಯಬೇಕು ಮತ್ತು ಅತಂತ್ರದಲ್ಲಿರುವ ವಿದ್ಯಾರ್ಥಿಗಳಿಗೆ ಪರಿಹಾರ ಒದಗಿಸಬೇಕು ಎಂದು ನಿಯೋವು ಒತ್ತಾಯಿಸಿತು.
Facebook Comments
You may like
ಮಂಗಳೂರು ಮೇಯರ್ ಆಗಿ ಪ್ರೇಮಾನಂದ ಶೆಟ್ಟಿ.. ಸುಮಂಗಲಾ ರಾವ್ ಉಪ ಮೇಯರ್
ಚಡ್ಡಿ ಕದ್ದು ಧರಿಸಿದ್ದಕ್ಕೆ ಸಹೋದ್ಯೋಗಿಯನ್ನು ಚಾಕುವಿನಿಂದ ಇರಿದು ಕೊಂದ!
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಮತ್ತೆ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆ.. ಫೆಬ್ರವರಿಯಲ್ಲಿ ಇದು 16ನೇ ಬಾರಿ
ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಮತ್ತೆ ಕಾಂಡೋಮ್ ಪತ್ತೆ..ಮುಂದುವರೆದ ವಿಕೃತಿ
ಕಾಸರಗೋಡು ಗಡಿಯಲ್ಲಿ ಸಂಚಾರಕ್ಕೆ ನಿರ್ಬಂಧ – ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
You must be logged in to post a comment Login