LATEST NEWS
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕ್ಯಾಂಪಸ್ ಫ್ರಂಟ್ ನಿಂದ ಪ್ರತಿಭಟನೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕ್ಯಾಂಪಸ್ ಫ್ರಂಟ್ ನಿಂದ ಪ್ರತಿಭಟನೆ
ಬಂಟ್ವಾಳ ಡಿಸೆಂಬರ್ 16: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಜಾಮಿಯ ಮಿಲ್ಲಿಯಾ ವಿದ್ಯಾರ್ಥಿಗಳ ಮೇಲಿನ ಪೋಲೀಸ್ ದೌರ್ಜನ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಬಂಟ್ವಾಳ ಘಟಕದ ವತಿಯಿಂದ ತಲಪಾಡಿಯಲ್ಲಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತ ಪಡಿಸಿದರು. ರಾಜ್ಯ ಕಾರ್ಯದರ್ಶಿ ಅಶ್ವಾನ್ ಸಾದಿಕ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ರಾಜ್ಯ ಸಮಿತಿ ಸದಸ್ಯ ಇಮ್ರಾನ್ ಪಿಜೆ, ಜಿಲ್ಲಾಧ್ಯಕ್ಷ ಫಹಾದ್ ಅನ್ವರ್ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.