Connect with us

KARNATAKA

ಹೆಲ್ಮೆಟ್ ಧರಿಸದಿದ್ದರೆ ಇನ್ಮುಂದೆ ಪರವಾನಿಗೆ ರದ್ದು

ಮಂಗಳೂರು, ಅಕ್ಟೋಬರ್ 19: ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು ಖಡ್ಡಾಯವಾಗಿದ್ದು, ಹೆಲ್ಮೆಟ್‌ ಧರಿಸದೇ ಇರುವ ಚಾಲಕರ ದಂಡ ವಸೂಲಾತಿಯೊಂದಿಗೆ ಸವಾರ ಚಾಲನಾ ಪರವಾನಗಿಯನ್ನು ಕನಿಷ್ಠ ಮೂರು ತಿಂಗಳ ಕಾಲ ಅಮಾನತುಗೊಳಿಸಲಾಗುವುದು ಎಂದು ರಾಜ್ಯ ಸರಕಾರ ಇದೀಗ ಆದೇಶ ಹೊರಡಿಸಿದೆ.

ಈ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚನೆ ಯನ್ನು ನೀಡಿದ್ದಾರೆ.

ಈ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ, ಹಾಗೂ ಸಿಬಂದಿಗಳಿಗೆ ಸೂಚನೆ ನೀಡಲಾಗಿದೆ.