Connect with us

    LATEST NEWS

    ದಕ್ಷಿಣಕನ್ನಡದಲ್ಲಿ ಗೆಲುವಿನ ನಗೆ ಬೀರಿದ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ

    ಮಂಗಳೂರು ಜೂನ್ 04: ಕರಾವಳಿಯಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್ ನ ಪದ್ಮರಾಜ್ ಅವರಿಗಂತ 1,42,634 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.


    ಭಾರೀ ಪೈಪೋಟಿ ಕ್ಷೇತ್ರವಾಗಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೇಸ್ ಬಿಜೆಪಿಗೆ ಪ್ರಬಲ ಪೈಪೋಟಿ ಕೊಟ್ಟಿತ್ತು,

    ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ- 6,62,529  ಮತವನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್-5,19,895 ಮತ ಪಡೆದಿದ್ದಾರೆ.  ಆದರೆ ತಮ್ಮ ಭದ್ರಕೋಟೆಯಲ್ಲಿ ಮತ್ತೆ ಬಿಜೆಪಿ ಗೆಲುವನ್ನು ಸಾಧಿಸುವ ಮೂಲಕ ಮತ್ತೆ ಸೀಟ್ ನ್ನು ಉಳಿಸಿಕೊಂಡಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ನೋಟ 20,199 ಮತ ಚಲಾವಣೆ ಯಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply