Connect with us

UDUPI

ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಕಾರು; ಮಗು ಸಾವು..ಇಬ್ಬರು ಗಂಭೀರ

ಉಡುಪಿ ಅಗಸ್ಟ್ 1: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಎರಡು ವರ್ಷದ ಮಗು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ಅಂಬಲಪಾಡಿ ಬಳಿ ನಡೆದಿದೆ.


ಈ ಕಾರು ಮಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ತರೆಳುತ್ತಿದ್ದು, ಈ ವೇಳೆ ಅಂಬಲಪಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಡಿವೈಡರ್ ಗೆ ಢಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ. ಘಟನೆಯಲ್ಲಿ ಮಹಿಳೆಗೆ ಗಂಭೀರ ಗಾಯವಾಗಿದ್ದು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Facebook Comments

comments