Connect with us

KARNATAKA

ಅಪಘಾತದಲ್ಲಿ ಕಾರಿಗೆ ಬೆಂಕಿ – ಹೊರಬರಲಾಗದೆ ಸಜೀವ ದಹನಗೊಂಡ ಚಾಲಕ

ಚಾಮರಾಜನಗರ, ಜು2: ಗೂಡ್ಸ್ ಲಾರಿ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಕಾರಿನ ಚಾಲಕ ಸಜೀವ ವಾಗಿ ದಹನಗೊಂಡು ಸಾವನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿಯ ಗುಂಡ್ಲುಪೇಟೆ ತಾಲೂಕು ಬೇಗೂರು ಬಳಿ ಹಿರೀಕಾಟ ಗೇಟ್ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ.


ಮೃತರನ್ನು ಮೈಸೂರಿನ ಮುಝಮ್ಮಿಲ್ ಅಹ್ಮದ್(35) ಎಂದು ಗುರುತಿಸಲಾಗಿದೆ. ಲಾರಿ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಶನಿವಾರ ರಾತ್ರಿ 10:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾರು ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ಹಾಗೂ ಗೂಡ್ಸ್ ಲಾರಿ ಮೈಸೂರು ಕಡೆಗೆ ತೆರಳುತ್ತಿತ್ತು. ಎರಡು ವಾಹನಗಳು ಮುಖಾಮುಖಿ ಢಿಕ್ಕಿಯಾಗಿದ್ದು, ಈ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹತ್ತಿಕೊಳ್ಳು ತ್ತಿದ್ದಂತೆ ಗೂಡ್ಸ್ ವಾಹನದಲ್ಲಿದ್ದವರು ಹೊರಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಚಾಲಕ ಹೊರಬರಲಾಗದೆ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *