LATEST NEWS
ಡಿವೈಡರ್ ದಾಟಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಕಾರು- ಮಹಿಳೆಗೆ ಗಂಭೀರ ಗಾಯ

ಮಂಗಳೂರು ಎಪ್ರಿಲ್ 09: ಕಾರೊಂದು ಡಿವೈಡರ್ ದಾಟಿ ಮತ್ತೊಂದು ಕಾರು ಹಾಗೂ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಘಟನೆ ಬಳ್ಳಾಲ್ ಬಾಗ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ.
ಪಿವಿಎಸ್ ಕಡೆಯಿಂದ ಲಾಲ್‌ಭಾಗ್ ಕಡೆಗೆ ಅತೀ ವೇಗದಿಂದ ತೆರಳುತ್ತಿದ್ದ ಬಿಎಂಡಬ್ಲ್ಯೂ ಕಾರು ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ಕೂಟಿಗೆ ಢಿಕ್ಕಿ ಹೊಡೆದಿದೆ.ಕಾರು ಹೊಡೆದ ರಭಸಕ್ಕೆ ಸ್ಕೂಟಿ ಚಲಾಯಿಸುತ್ತಿದ್ದ ಮಹಿಳೆ ರಸ್ತೆಗೆ ಬಿದ್ದ ಸಂದರ್ಭ ಸ್ಕೂಟಿಯ ಹಿಂದಿನಿಂದ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮತ್ತೆ ಮಹಿಳೆಗೆ ಢಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
