KARNATAKA
ನಟ ಜಗ್ಗೇಶ್ ಮಗ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!!

ಚಿಕ್ಕಬಳ್ಳಾಪುರ ಜುಲೈ 1: ಕನ್ನಡದ ಹಿರಿಯ ನಟ ಜಗ್ಗೇಶ್ ಪುತ್ರ ಯತಿರಾಜ್ ಪ್ರಯಾಣಿಸುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 44 ಅಗಲಗುರ್ಕಿಯ ಬಳಿ ಅಪಘಾತಕ್ಕೀಡಾಗಿದೆ.
ಯತಿರಾಜ್ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದು, ರಸ್ತೆ ಮಧ್ಯೆ ಬಂದ ನಾಯಿಯೊಂದನ್ನು ತಪ್ಪಿಸಲು ಹೋಗಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಂತರ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ತೀವೃತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಯತಿರಾಜ್ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಚಿಕ್ಕಬಳ್ಳಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ನಟ ಜಗ್ಗೇಶ ರಾಯರ ಕೃಪೆಯಿಂದ ನನ್ನ ಮಗ ಬದುಕುಳಿದಿದ್ದಾನೆ. ಇದೊಂದು ರಾಯರ ಪವಾಡವೇ ಸರಿ ಎಂದಿದ್ದಾರೆ.
