DAKSHINA KANNADA
ನಾಯಿ ತಪ್ಪಿಸಲು ಹೋಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು ಮೂವರು ಸ್ಥಳದಲ್ಲೇ ಸಾವು

ನಾಯಿ ತಪ್ಪಿಸಲು ಹೋಗಿ ಸೇತುವೆಯಿಂದ ಕೆಳಗೆ ಬಿದ್ದ ಕಾರು ಮೂವರು ಸ್ಥಳದಲ್ಲೇ ಸಾವು
ಚಿಕ್ಕಮಗಳೂರು ಅಕ್ಟೋಬರ್ 25: ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಕಾರು ಸೇತುವೆಯಿಂದ ಕೆಳಗೆ ಬಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಡವನದಿಣ್ಣೆ ಬಳಿ ನಡೆದಿದೆ.
ಮೃತರು ಬೆಂಗಳೂರಿನ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಧರ್ಮಸ್ಥಳಕ್ಕೆ ತೆರಳಿ ವಾಪಾಸ ಬರುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಸೇತುವೆ ಸಮೀಪ ಬರುವಾ ರಸ್ತೆ ಗೆ ನಾಯಿಯೊಂದು ಅಡ್ಡ ಬಂದಿದ್ದು ನಾಯಿಯನ್ನು ತಪ್ಪಿಸಲು ಹೋಗಿ ಕಾರು ಸೇತುವೆಯಿಂದ ಕಳಗೆ ಬಿದ್ದಿದೆ.

ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮೂಡಿಗೆರೆ ಆಸ್ಪತ್ರೆಗೆ ಒಯ್ಯಲಾಗಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.