LATEST NEWS
ಕಂಟೈನರ್ ಲಾರಿಗೆ ಕಾರು ಡಿಕ್ಕಿ ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಪ್ರಾಧ್ಯಾಪಕ ಅನಂತೇಶ ರಾವ್ ನಿಧನ

ಹೊನ್ನಾವರ ಮಾರ್ಚ್ 18 : ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಸಂಭವಿಸಿದೆ. ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್ (40) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ಅನಂತೇಶ ರಾವ್ ಉಡುಪಿಯಿಂದ ಸೋದೆ ಮೂಲ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರು ಹೊನ್ನಾವರದ ಬಳಿ ಕಂಟೈನರ್‌ಗೆ ಢಿಕ್ಕಿ ಹೊಡೆದಿದ್ದು, ಈ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಿವಾಸಿಯಾದ ಅವರು ಪತ್ನಿ ಮಂಗಳೂರು ಎಂ.ವಿ.ಶೆಟ್ಟಿ ಎಲೈಡ್ ಹೆಲ್ತ್ ಸೈನ್ಸಸ್ ಕಾಲೇಜಿನ ಪ್ರಾಂಶುಪಾಲೆ ಶ್ರೀಪ್ರಿಯಾ ಅನಂತೇಶ್ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.
