Connect with us

LATEST NEWS

ಮರಕ್ಕೆ ಡಿಕ್ಕಿ ಹೊಡೆದ ಕಾರು – ಮಹಿಳೆ ಸಾವು ಮೂವರು ಗಂಭೀರ

ಮಂಗಳೂರು ಫೆಬ್ರವರಿ 4: ಕುಳಾಯಿ ಸಮೀಪ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ರಾತ್ರಿ 12 ಗಂಟೆಗೆ ನಡೆದಿದೆ.


ಮೃತ ಮಹಿಳೆಯನ್ನು ಬೋಂದೆಲ್‌ ನ ನಿವಾಸಿ ಸುಹಾನಾ (26) ಎಂದು ಗುರುತಿಸಲಾಗಿದೆ‌. ಕಾರಿನಲ್ಲಿ‌ ಸುಹಾನಾರ ಸಹೋದರಿ ಫಾತಿಮಾ ಶೌರೀನ್, ಸಹೋದರರಾದ ರಾಹಿಲ್ ಶಮೀಮ್ ಮತ್ತು ರಾಝಿಕ್ ಶಹಾನ್ ಎಂಬವರಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಲಾಯಿಸುತ್ತಿದ್ದ ರಾಹಿಲ್ ಶಮೀಮ್‌ಗೆ ವಿರುದ್ಧ ದಿಕ್ಕಿನಲ್ಲಿ ಮತ್ತೊಂದು ಕಾರು ಬಂದ ಹಿನ್ನಲೆ ಢಿಕ್ಕಿ‌ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನ ನಡೆಸಿದಾಗ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಕಾರಲ್ಲಿದ್ದ ನಾಲ್ಕು ಮಂದಿಗೂ ಗಾಯವಾಗಿದ್ದು, ಆ ಪೈಕಿ‌ ಸುಹಾನಾ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಸುಹಾನಾ ಅವರು ಪತಿ ಮತ್ತು ಇಬ್ಬರು ಪುತ್ರರನ್ನು‌ ಅಗಲಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.