DAKSHINA KANNADA
ಓವರ್ ಟೇಕ್ ಬರದಲ್ಲಿ ಕಾರುಗಳ ನಡುವೆ ಅಪಘಾತ – ಓರ್ವ ಸಾವು

ನೆಲ್ಯಾಡಿ ಸೆಪ್ಟೆಂಬರ್ 10: ಓವರ್ ಟೆಕ್ ಬರದಲ್ಲಿ ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೆಪ್ಟೆಂಬರ್ 9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ.
ಮೃತರನ್ನು ಹಾಸನದ ನಿವಾಸಿ ಚಂದ್ರೇಗೌಡ (50) ಎಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ರಸ್ತೆಯಲ್ಲೇ ತಿರುಗಿದ ಕಾರು ಅದರ ಹಿಂದಿದ್ದ ಹಾಸನದ ಕಡೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಇನ್ನೊಂದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.