Connect with us

UDUPI

ಉಚ್ಚಿಲ; ಕಾರುಗಳು ಮುಖಾಮುಖಿ ಡಿಕ್ಕಿ ಓರ್ವ ಗಂಭೀರ ಗಾಯ

ಉಡುಪಿ ಜುಲೈ 18: ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಉಚ್ಚಿಲದಲ್ಲಿ ಸಂಭವಿಸಿದೆ.


ಮಾರುತಿ ಡಿಸೈರ್ ಕಾರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು ಕಡೆಯಿಂದ ಉಚ್ಚಿಲ ಪಣಿಯೂರು ಗೆ ತೆರಳುತ್ತಿದ್ದ ಸಂದರ್ಭ ಉಚ್ಚಿಲ-ಪಣಿಯೂರು ಹೆದ್ದಾರಿ ಕ್ರಾಸ್ ಬಳಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿದೆ.


ಅಪಘಾತದ ತಿವ್ರತೆಗೆ ಓಮ್ನಿ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ.

Facebook Comments

comments