ವಿಟ್ಲ, ಮೇ 5: ಕ್ರೆಟಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಆದರೆ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ವಿಟ್ಲ ಮೂಲದವರೆನ್ನಲಾಗಿದೆ.