KARNATAKA
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಒಂದೇ ಕುಟುಂಬದ ಐವರ ದುರ್ಮರಣ
ಕುದೂರು ಸೆಪ್ಟೆಂಬರ್ 17: ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಒಂದೇ ಕುಟುಂಬದ ಐವರು ಸಾವನಪ್ಪಿದ ಘಟನೆ ಇಲ್ಲಿನ ಭದ್ರಾಪುರ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರಿದ್ದು, ಎಲ್ಲರೂ ಮಾಗಡಿಯವರು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಶವಗಳನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತರೆಲ್ಲರೂ ಹುಲಿಯೂರು ದುರ್ಗ ಸಮೀಪದ ಹುಲಿವಾಹನ ಎಂಬ ಗ್ರಾಮದವರಾಗಿದ್ದು, ಬೆಂಗಳೂರಿನ ಬಾಗಲಗುಂಟೆಯಲ್ಲಿ ನೆಲೆಸಿದ್ದರು. ಪೂಜಾ ಕಾರ್ಯ ನಿಮಿತ್ತ ಗ್ರಾಮಕ್ಕೆ ಕಾರಿನಲ್ಲಿ ಬಂದಿದ್ದ ಕುಟುಂಬದವರು, ವಾಪಸ್ ಹೋಗುವಾಗ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
You must be logged in to post a comment Login