Connect with us

    BANTWAL

    ಕಾರು – ಆಟೋರಿಕ್ಷಾ ನಡುವೆ ಅಪಘಾತ – ರಿಕ್ಷಾ ಚಾಲಕ ಸ್ಥಳದಲ್ಲೇ ಸಾವು

    ಬಂಟ್ವಾಳ, ಮಾರ್ಚ್ 27 : ಕಾರು ಹಾಗೂ ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಾಣಿ – ಪುತ್ತೂರು ರಸ್ತೆಯ ಕೊಡಾಜೆಯ ಮಠ ಎಂಬಲ್ಲಿ ನಡೆದಿದೆ.


    ಮೃತಪಟ್ಟ ಆಟೋ ಚಾಲಕನನ್ನು ಕೊಡಾಜೆ ನಿವಾಸಿ ಹಮೀದ್ ಎಂದು ಗುರುತಿಸಲಾಗಿದೆ. ಆಟೋ ರಿಕ್ಷಾದ ಹಿಂಬದಿ ಸವಾರೆಯಾಗಿದ್ದ ಹಮೀದ್ ಅವರ ಪತ್ನಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮಾಣಿ ಕಡೆಯಿಂದ ಬರುತ್ತಿದ್ದ ಆಟೋ ರಿಕ್ಷಾ ಮಾಣಿಯಿಂದ ಪುತ್ತೂರು ಕಡೆ ಸಂಚರಿಸುತ್ತಿದ್ದ ಕಾರಿಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಬ್ರೇಕ್ ವೈಫಲ್ಯಕ್ಕೀಡಾಗಿದ್ದರಿಂದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply