DAKSHINA KANNADA
ಶೇಖಮಲೆಯಲ್ಲಿ ಬೊಲೆರೋ ಕಾರು ಮುಖಾಮುಖಿ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು
ಪುತ್ತೂರು ಜೂನ್ 16 : ಕಾರು ಮತ್ತು ಬೊಲೆರೊ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನಪ್ಪಿರುವ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ.
ಮೃತರನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ತ್ಯಾಗತ್ತೂರು ನಿವಾಸಿಗಳಾದ ಲೋಕೇಶ್ (48) ಮತ್ತು ರವೀಂದ್ರ (56) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಈಶ್ವರಮಂಗಲದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಬೊಲೆರೊ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login