Connect with us

    KARNATAKA

    ನಿಂತಿದ್ದ ಕಂಟೈನರ್ ಲಾರಿಗೆ ಕಾರು ಡಿಕ್ಕಿ – ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವು

    ಕಲಬುರಗಿ ಡಿಸೆಂಬರ್ 07: ನಿಂತಿದ್ದ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿಜಯಪುರ ಜಿಲ್ಲಾ ಸಿಂದಗಿ ತಾಲೂಕಿನ ಸಿಪಿಐ ಹಾಗೂ ಅವರ ಪತ್ನಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.


    ನೆಲೋಗಿ ಕ್ರಾಸ್ ಬಳಿ ನಿಂತಿದ್ದ, ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಿಪಿಐ ರವಿ ಉಕ್ಕುಂದ, ಪತ್ನಿ ಮಧು ಸಾವನಪ್ಪಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದ ಸಿಪಿಐ ದಂಪತಿ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply