Connect with us

    DAKSHINA KANNADA

    ಸ್ಕೂಟರ್ ಗೆ ಎರಡು ಕಾರು ಡಿಕ್ಕಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

    ಸ್ಕೂಟರ್ ಗೆ ಎರಡು ಕಾರು ಡಿಕ್ಕಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

    ಪುತ್ತೂರು ನವೆಂಬರ್ 22: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

    ಪುತ್ತೂರಿನ ಎಳ್ಮುಡಿಯಲ್ಲಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಬರುತ್ತಿದ್ದ ಸ್ಕೂಟರ್ ನ ಒಂದು ಬದಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆ ಸ್ಕೂಟರ್ ನಿಂದ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ರಸ್ತೆಗೆ ಎಸೆಯಲ್ಪಟ್ಟ ಮಹಿಳೆಗೆ ಮತ್ತೊಂದು ಕಾರು ಬಂದು ಡಿಕ್ಕಿ ಹೊಡೆದಿದೆ.

    ಎರಡು ಕಾರುಗಳಿಗೆ ಡಿಕ್ಕಿ ಹೊಡೆದರು ಪ್ರಾಣಾಪಾಯದಿಂದ ಪಾರಾಗಿದ್ದು, ಅಪಘಾತದಲ್ಲಿ ಮಹಿಳೆಗೆ ಪರಚಿದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಘಟನೆಯ ಸಿಸಿಟಿವಿ ವಿಡಿಯೋ ಅಪಘಾತದ ತೀವ್ರತೆ ತಿಳಿಸುತ್ತದೆ.

    Share Information
    Advertisement
    Click to comment

    You must be logged in to post a comment Login

    Leave a Reply