LATEST NEWS
ಕಾರು ಮತ್ತು ಟ್ಯಾಂಕರ್ ನಡುವೆ ಅಪಘಾತ – ಗೃಹ ರಕ್ಷಕದಳ ಸಿಬ್ಬಂದಿ ಗಂಭೀರ

ಉಡುಪಿ, ಜೂನ್ 30: ಕಾರು ಮತ್ತು ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಉದ್ಯಾವರದಲ್ಲಿ ನಡೆದಿದೆ.
ಗಾಯಾಳುವನ್ನು ಮುಲ್ಕಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಕೇಶ್(27) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡಿರುವ ಅವರನ್ನು ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಕೇಶ್ ರಾತ್ರಿ ಪಾಳಿಯ ಕರ್ತವ್ಯ ಮುಗಿಸಿ ಇಂದು ಮುಂಜಾನೆ 5:30ರ ಸುಮಾರಿಗೆ ಮುಲ್ಕಿಯಿಂದ ತನ್ನ ಕಾರಿನಲ್ಲಿ ಉಡುಪಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಉದ್ಯಾವರದ ಬಳಿ ರಾಕೇಶ್ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ತೆರಳುತ್ತಿದ್ದ ಟ್ಯಾಂಕರ್ ನ ಹಿಂಭಾಗಕ್ಕೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.