ಅರಂತೋಡು ಸೆಪ್ಟೆಂಬರ್ 03: ಕಾರು ಮತ್ತು ಟ್ಯಾಂಕರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಸಮೀಪ ಕಡೆಪಾಲ ಎಂಬಲ್ಲಿ ಬುಧವಾರ ನಡೆದಿದೆ.


ಮೃತರನ್ನು ಕೊಡಗಿನ‌ ಸಿದ್ದಾಪುರದ ನೆಲ್ಲಿಹುದುಕೇರಿ ನಿವಾಸಿ ಶೋಭಾ ಎಂದು ಗುರುತಿಸಲಾಗಿದೆ. ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಟ್ಯಾಂಕರ್ ಹಾಗೂ ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಮಧ್ಯೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮಹಿಳೆ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತಕ್ಕೆ ತುತ್ತಾದ ಕಾರು ಕೊಡಗಿನ ಸಿದ್ಧಾಪುರದ ನೆಲ್ಲಿಹುದಿಕೇರಿಯದ್ದು ಎನ್ನಲಾಗಿದೆ. ಗಾಯಾಳುಗಳಿಗೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share Information