DAKSHINA KANNADA
ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ – ಪ್ರಯಾಣಿಕರು ಪಾರು

ಕಡಬ ಮೇ 15: ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಕೊಂಬಾರು ಗ್ರಾಮದ ಪೆರುಂದೋಡಿ ಕಟ್ಟೆ ಎಂಬಲ್ಲಿ ನಡೆದಿದೆ. ಕಾರಿನಲ್ಲಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.
ಪಟ್ರಮೆ ನಿವಾಸಿ ಆನಂದ ಗೌಡ ಎಂಬವರಿಗೆ ಸೇರಿದ ಕಾರು ಇದಾಗಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಆನಂದ ಗೌಡ, ಮಗು ಸಹಿತ ನಾಲ್ವರು ಕಾರಿನಿಂದ ಇಳಿದು ಬಚಾವ್ ಆಗಿದ್ದಾರೆ. ಒಬ್ಬರಿಗೆ ಸಣ್ಣ ಪ್ರಮಾಣದ ಗಾಯವಾಗಿದೆ ಎಂದು ತಿಳಿದುಬಂದಿದೆ.
ಆಕಸ್ಮಿಕವಾಗಿ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ ಸ್ವಲ್ಪದರಲ್ಲೇ ಇಡೀ ಕಾರಿಗೆ ಹಬ್ಬಿ, ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದೆ.
