Connect with us

LATEST NEWS

ಪಿವಿಎಸ್ ಸರ್ಕಲ್ ಬಳಿ ಬೆಂಕಿಗೆ ಆಹುತಿಯಾದ ಕಾರು

ಮಂಗಳೂರು ಡಿಸೆಂಬರ್ 12: ನಗರದ ಪಿವಿಎಸ್ ಸರ್ಕಲ್ ನಲ್ಲಿ ಚಲಿಸುತ್ತಿದ್ದ ಕಾರೊಂದು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.


ಕೊಡಿಯಾಲ್ ಬೈಲ್ ನಿಂದ ಪಿವಿಎಸ್ ಕಡೆ ತೆರಳುತ್ತಿದ್ದ ಕಾರು ಪಿವಿಎಸ್ ಸರ್ಕಲ್ ಬಳಿ ಬರುತ್ತಿದ್ದಂತೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಕಾರು ಚಾಲಕ ಕಾರನ್ನು ನಿಲ್ಲಿಸಿದ್ದಾನೆ. ಕಾರಿನಲ್ಲಿ ಚಾಲಕ ಸೇರಿ ಮೂವರು ಮಹಿಳೆಯರಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಕಿ ಹೊತ್ತಿ ಉರಿಯುತ್ತಿದ್ದಂತೆ ಸಂಚಾರಿ ಪೊಲೀಸರು ಹಾಗೂ ಸಾರ್ವಜನಿಕರ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬಳಿಕ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆದರೂ ಕಾರು ಭಾಗಶಃ ಬೆಂಕಿಗೆ ಆಹುತಿಯಾಗಿದೆ.

Facebook Comments

comments