ಮೂಡುಬಿದಿರೆ, ಮೇ 16: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಸಮೀಪದ ಕೆಸರುಗದ್ದೆ ಮಾರ್ಗದಲ್ಲಿ ಶನಿವಾರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದ ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಭಾಗಶಃ ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಸ್ತೆಯಲ್ಲಿ ನಿಂತಿದ್ದ ನೀರು ಈ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಬನ್ನಡ್ಕ-ಕೆಸರುಗದ್ದೆ ಮಾರ್ಗದಲ್ಲಿ ಚಲಿಸುತ್ತಿದ್ದ ಕಾರಿನ ಚಾಲಕ, ರಸ್ತೆ ಮಧ್ಯೆ ನೀರು ನಿಂತಿರುವುದನ್ನು ಗಮನಿಸಿ ತಕ್ಷಣವೇ ಬ್ರೇಕ್ ಹಾಕಿದ್ದಾರೆ. ಈ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲೇ ತಿರುಗಿ, ಪಕ್ಕದ ಡಿವೈಡರ್ಗೆ ಬಲವಾಗಿ ಅಪ್ಪಳಿಸಿದೆ.