Connect with us

    KARNATAKA

    ಡಿವೈಡರ್‌ ಗೆ ಹೊಡೆದ ಬೈಕಿಗೆ ಕಾರು ಡಿಕ್ಕಿ : ಕೇರಳ ಮೂಲದ ಇಬ್ಬರು ಮೃತ್ಯು..!!

    ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕಿಗೆ ಕಾರು ಡಿಕ್ಕಿ ಯಾಗಿ ಇಬ್ಬರು ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಎಸ್‌.ಎಸ್. ಆಸ್ಪತ್ರೆಯ ರೈಲ್ವೆ ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ.
    ದಾವಣಗೆರೆ: ಡಿವೈಡರ್‌ಗೆ ಡಿಕ್ಕಿ ಹೊಡೆದ ಬೈಕಿಗೆ ಕಾರು ಡಿಕ್ಕಿ ಯಾಗಿ ಇಬ್ಬರು ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಎಸ್‌.ಎಸ್. ಆಸ್ಪತ್ರೆಯ ರೈಲ್ವೆ ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸಂಭವಿಸಿದೆ.


    ಕೇರಳದ ಪಾಲಕ್ಕಾಡ್ ಜಿಲ್ಲೆಯ ಅತುಲ್ (25) ಹಾಗೂ ಹೃಷಿಕೇಷ್ (24) ಮೃತ ದುರ್ದೈವಿಗಳು.

    ಗೋವಾದಿಂದ ಟ್ರಿಪ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾಗ ಗುರುವಾರ ಬೆಳಿಗ್ಗೆ ಅಪಘಾತ ಸಂಭವಿಸಿದೆ.

    ನಿಯಂತ್ರಣ ತಪ್ಪಿದ ಬೈಕ್‌ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರರು ಸೇತುವೆ ಮೇಲಿನಿಂದ ರೈಲ್ವೆಯ ಹಳಿಯ ಪಕ್ಕ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ರಸ್ತೆಯ ಬದಿಯಲ್ಲಿ ಬಿದ್ದಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಕುರಿತು ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply