ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ: ಮಹಿಳೆ ಸಾವು

ಪುತ್ತೂರು, ಫೆಬ್ರವರಿ 24 : ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವಳು ಸಾವನ್ನಪ್ಪಿದ ಧಾರುಣ ಘಟನೆ ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. ಸುಬ್ರಹ್ಮಣ್ಯದಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಕಾರು ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತಡೆಗೋಡೆಗೆ ಢಿಕ್ಕಿ ಹೊಡೆದು ಕಮರಿಗೆ ಉರುಳಿದ ಪರಿಣಾಮ ಕಾರಿನಲ್ಲಿ ಸಂಚರಿಸುತ್ತಿದ್ದವರ ಪೈಕಿ ಮಹಿಳೆಯೋರ್ವಳು ಸಾವನ್ನಪ್ಪಿದ್ದು, ಇತರ ಐವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಉಪ್ಪಿನಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

Facebook Comments

comments