Connect with us

LATEST NEWS

ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು- ಸಮಯ ಪ್ರಜ್ಞೆಯಿಂದ ಪಾರಾದ ಪ್ರಯಾಣಿಕರು

ಉಡುಪಿ, ಅಕ್ಟೋಬರ್ 8: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಿಲ್ಲೆಯ ಕುಂದಾಪುರ ತಾಲೂಕಿನ ಬಾರಕೂರು ಬಳಿ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಗೆ ಹೊರಳಿದ್ದು, ನೋಡ ನೋಡುತ್ತಿದ್ದಂತೆ ಕೆರೆಗೆ ಬಿದ್ದಿದೆ. ಇನ್ನೇನು ನೀರಲ್ಲಿ ಮುಳಗಬೇಕು ಎನ್ನುವಷ್ಟರಲ್ಲಿ ಬಾಗಿಲು ತೆರೆದು ಎಲ್ಲರೂ ಹೊರಗೆ ಬಂದಿದ್ದಾರೆ. ನಂತರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೂಡ್ಲಿ ರಾಮಕೃಷ್ಣ ಅವರ ಕುಟುಂಬ ಯಡ್ತಾಡಿಯಿಂದ ಬಂಡೀಮಠಕ್ಕೆ ತೆರಳುತ್ತಿತ್ತು. ಈ ಸಂದರ್ಭದಲ್ಲಿ ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಭಾಗಕ್ಕೆ ಹೋಗಿದೆ. ಪಕ್ಕದಲ್ಲೇ ಇದ್ದ ಕೆರೆಗೆ ಹೊರಳಿದೆ. ಕಾರಿನ ಮುಂಭಾಗ ಮುಳುಗುತ್ತಿದ್ದಂತೆ ಕಾರಿನಲ್ಲಿದ್ದ ಎಲ್ಲರೂ ಬಾಗಿಲು ತೆಗೆದು ಹೊರಗೆ ಬಂದಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರ ಪ್ರಯತ್ನದಿಂದ ಕಾರನ್ನು ಮೇಲಕ್ಕೆತ್ತಲಾಗುತ್ತಿದೆ. ಕೋಟ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

Facebook Comments

comments