Connect with us

    LATEST NEWS

    ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕಿಂಗ್ ನಲ್ಲಿದ್ದ ಕಾರು ಬೆಂಕಿಗಾಹುತಿ…!!

    ಮಂಗಳೂರು ನವೆಂಬರ್ 26: ಪಾರ್ಕಿಂಗ್ ಮಾಡಿದ್ದ ಕಾರೊಂದು ಬೆಂಕಿಗಾಹುತಿಯಾಧ ಘಟನೆ ಮಂಗಳೂರು ಬಲ್ಮಠ ಜ್ಯೂಸ್‌ ಜಂಕ್ಷನ್‌ ಮುಂಭಾಗದಲ್ಲಿ ನಡೆದಿದೆ.


    ಪಾರ್ಕಿಂಗ್ ಮಾಡಿದ್ದ ಫೋರ್ಡ್‌ ಕಂಪೆನಿಯ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಬಹುತೇಕ ಸುಟ್ಟು ಹೋಗಿದೆ. ಕಾರಿನ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

    ಬೆಂಕಿ ಹಿಡಿದ ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ನೀರು ಹಾಕಿ ಪ್ರಯತ್ನಿಸಿದ್ದಾರೆ. ಸ್ಥಳದಲ್ಲಿ ದಟ್ಟವಾದ ಹೊಗೆ ಕೂಡಾ ಆವರಿಸಿದ್ದು, ಆತಂಕದ ವಾತಾವರಣ ಉಂಟಾಗಿತ್ತು. ಟ್ರಾಫಿಕ್‌ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭ ರಸ್ತೆ ಸಂಚಾರ ಕೊಂಚ ಹೊತ್ತು ಅಸ್ತವ್ಯಸ್ಥಗೊಂಡಿತು.

    Share Information
    Advertisement
    Click to comment

    You must be logged in to post a comment Login

    Leave a Reply