BANTWAL
ಬಂಟ್ವಾಳ :ಆಟೊ ರಿಕ್ಷಾಕ್ಕೆ ಕಾರು ಡಿಕ್ಕಿ- ಆಟೋ ಚಾಲಕ ಗಂಭೀರ..!

ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿರೋಡಿನಲ್ಲಿ ನಡೆದಿದೆ.
ಬಂಟ್ವಾಳ: ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿರೋಡಿನಲ್ಲಿ ನಡೆದಿದೆ.

ಕಾರು ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು, ಅಟೋ ಚಾಲಕ ಮಹಮ್ಮದ್ ಸಾದಿಕ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೂಡಿನಬಳಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಸುರಕ್ಷಾ ಅಧಿಕಾರಿಯೋರರ್ವರನ್ನು ರಿಕ್ಷಾದಲ್ಲಿ ಮಹಮ್ಮದ್ ಸಾದಿಕ್ ಕರೆದುಕೊಂಡು ಹೋಗುವ ಸಂದರ್ಭ ಪಾಣೆಮಂಗಳೂರು ಕಡೆಯಿಂದ ಬರುವ ಕಾರೊಂದು ರೈಲು ನಿಲ್ದಾಣದ ಸಮೀಪವಿರುವ ಲಯನ್ಸ್ ಸೇವಾ ಮಂದಿರದ ಪಾರ್ಕ್ ನ ಮುಂಭಾಗದಲ್ಲಿ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ.
ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅಮಿತಾ ಅವರು ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.
ಕಾರು ಚಾಲಕ ಉಬೈದುಲ್ಲಾ ಎಂಬಾತನ ವಿರುದ್ಧ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.