Connect with us

    LATEST NEWS

    ಮಂಗಳೂರು – ಪುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ ಹರಿದ ಕಾರು – ಇಬ್ಬರಿಗೆ ಗಾಯ

    ಮಂಗಳೂರು ನವೆಂಬರ್ 25: ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದ ಬಳಿ ಪುಟ್ ಪಾತ್ ಮೇಲೆ ಮಲಗಿದ್ದ ಕಾರ್ಮಿಕರ ಮೇಲೆ ಕಾರೊಂದು ಹರಿದ ಘಟನೆ ಇಂದು ನಡೆದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರಿಗೆ ಗಾಯಗಳಾಗಿದ್ದು, ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.


    ಇಂದು ಬೆಳಗ್ಗೆ ಇಲ್ಲಿನ ರಸ್ತೆಯಲ್ಲಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸ್ಥಳದಲ್ಲಿ ಕೆಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆಯಲ್ಲದೆ, ಹೊರ ರಾಜ್ಯಗಳಿಂದ ಆಗಮಿಸಿದ್ದ ಪುಟ್ ಪಾತ್ ನಲ್ಲಿ ಮಲಗಿದ್ದ 10ಕ್ಕೂ ಅಧಿಕ ಕಾರ್ಮಿಕರು ಮೇಲೆ ಚಲಿಸಿದೆ. ಇದರಿಂದ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ನಗರ ಸಂಚಾರ ದಕ್ಷಿಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply