Connect with us

    LATEST NEWS

    ಮುಕೇಶ್ ಅಂಬಾನಿ ನಿವಾಸದ ಬಳಿ ಜಿಲೆಟಿನ್ ಸ್ಪೋಟ ಪತ್ತೆ

    ಮುಂಬೈ ಫೆಬ್ರವರಿ 25: ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಪೋಟಕ ಜಿಲೆಟಿನ್ ತುಂಬಿರುವ ಕಾರೊಂದು ಕಾಣಿಸಿಕೊಂಡಿದ್ದು, ಆತಂಕ ಸೃಷ್ಠಿಸಿದೆ. ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳ ಸಿಬ್ಬಂದಿ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

    ಮುಂಬೈನ ಪೆಡ್ಡಾರ್ ರಸ್ತೆಯಲ್ಲಿರುವ ಆಂಟಿಲಿಯಾ ನಿವಾಸದ ಬಳಿ ಸ್ಕಾರ್ಪಿಯೋ ಗಾಡಿ ಒಂದು ಸಾಕಷ್ಟು ಸಮಯದಿಂದ ನಿಂತಿದ್ದನ್ನು ಅಂಬಾನಿಯವರ ಭದ್ರತಾ ಸಿಬ್ಬಂದಿ ನೋಡಿದ್ದಾರೆ. ತಕ್ಷಣ ಆ ಮಾಹಿತಿಯನ್ನು ಮುಂಬೈ ಪೊಲೀಸರಿಗೆ ಕೊಡಲಾಗಿದೆ.

    ಸ್ಥಳಕ್ಕೆ ಬಂದ ಪೊಲೀಸರು ಬಾಂಬ್​ ನಿಗ್ರಹ ದಳಕ್ಕೂ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದಾರೆ. ಕಾರಿನ ಒಳಗೆ ಪರಿಶೀಲನೆ ನಡೆಸಿದಾಗ ಅದರಲ್ಲಿ 20 ಜೆಲಾಟಿನ್ ಸ್ಟಿಕ್‌ಗಳು ಕಾಣಿಸಿವೆ. ಇವುಗಳನ್ನು ಸ್ಫೋಟಕ ತಯಾರು ಮಾಡಲು ಬಳಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಶ್ವಾನಪಡೆಯೂ ಬಂದಿದ್ದು ಪರಿಶೀಲನೆ ನಡೆಸಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply