LATEST NEWS
ಕ್ಯಾಂಪ್ಕೋ ಅಧ್ಯಕ್ಷರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು
ಕ್ಯಾಂಪ್ಕೋ ಅಧ್ಯಕ್ಷರ ವಿರುದ್ದ ಚುನಾವಣಾ ಆಯೋಗಕ್ಕೆ ದೂರು
ಮಂಗಳೂರು ಎಪ್ರಿಲ್ 10:ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ಕ್ಯಾಂಪ್ಕೋ ಅಧ್ಯಕ್ಷರ ಮೇಲೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆಯನ್ನು ಕ್ಯಾಂಪ್ಕೋ ಅಧ್ಯಕ್ಷರಾದ ಎಸ್. ಆರ್ ಸತೀಶ್ಚಂದ್ರನ್ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಿನ್ನೆ ಮಂಗಳೂರಿನಲ್ಲಿ ಕ್ಯಾಂಪ್ಕೊ ಅಧ್ಯಕ್ಷ ಎಸ್. ಆರ್ ಸತೀಶ್ಚಂದ್ರನ್ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು ಈ ಪತ್ರಿಕಾಗೋಷ್ಠಿಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕವಲ್ಲ ಅದು ಕ್ಯಾನ್ಸರನ್ನು ಗುಣಪಡಿಸುಪಡಿಸುತ್ತದೆ. ಈ ವಿಚಾರವಾಗಿ ಕೇಂದ್ರ ಸರಕಾರ ಕೃಷಿ ಸಚಿವ ರಾಧಾಮೋಹನ್ ಸಿಂಗ್ ಮತ್ತು ಆರೋಗ್ಯ ಸಚಿವ ಜೆ.ಪಿ ನಡ್ಡ ಅವರಿಗೆ ಕ್ಯಾಂಪ್ಕೋ ಮತ್ತು ಕರ್ನಾಟಕ ಅಡಿಕೆ ಫೆಡರೇಷನ್ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ನೇತೃತ್ವದಲ್ಲಿ ವರದಿ ಸಲ್ಲಿಸಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ ಎಂದು ದೂರಲಾಗಿದೆ.
ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಪತ್ರಿಕಾಗೋಷ್ಠಿಯಲ್ಲಿ ಅವರು ಬಿಜೆಪಿ ಸರಕಾರ ಮಂತ್ರಿಗಳ ಹೆಸರನ್ನು ಉಲ್ಲೇಖ ಮಾಡಿದ್ದಾರೆ ಎಂದು ಕಾಂಗ್ರೇಸ್ ಆರೋಪಿಸಿದೆ.
ಈ ಹಿನ್ನಲೆಯಲ್ಲಿ ಕಾಂಗ್ರೇಸ್ ಇಂದು ದಕ್ಷಿಣಕನ್ನಡ ಜಿಲ್ಲಾ ಚುನಾವಣಾ ಅಧಿಕಾರಿಗೆ ಕ್ಯಾಂಪ್ಕೋ ಅಧ್ಯಕ್ಷರ ವಿರುದ್ದ ಕ್ರಮ ಜರುಗಿಸುವಂತೆ ದೂರು ನೀಡಿದೆ.