BANTWAL
ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಕೇಸ್…!

ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರ ಮೇಲೆ ಕೇಸ್…!
ಬಂಟ್ವಾಳ ಎಪ್ರಿಲ್ 20: ಎಪ್ರಿಲ್ 19 ರಂದು ಕೊರೊನಾದಿಂದಾಗಿ ಮೃತಪಟ್ಟ ಮಹಿಳೆಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದ ವೈದ್ಯರ ಮೆಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊರೊನಾ ವೈರಸ್ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಮತ್ತು ಸಂಬಂಧಿಸಿದ ಇಲಾಖೆಗೆ ಯಾವುದೇ ಮಾಹಿತಿ ನೀಡದೆ ಕೊರೊನಾ ಹರಡುವಿಕೆಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ, ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ತಾಲೂಕು ವೈದ್ಯಾಧಿಕಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು, ಸದ್ಯ ತನಿಖೆ ಮುಂದುವರಿದಿದೆ.
