LATEST NEWS
ತಲವಾರ್ ದಾಳಿ ಕಥೆ ಕಟ್ಟಿದ್ದ ಕಿಶೋರ್ ಮೇಲೆ ಪ್ರಕರಣ ದಾಖಲು…!!

ಮಂಗಳೂರು ಅಗಸ್ಟ್ 04: ತನ್ನ ಮೇಲೆ ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿಸಿದ್ದ ವ್ಯಕ್ತಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದಾಗ ತನ್ನ ಮೇಲೆ ಮೂವರು ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ಕೆ.ಸಿ.ರೋಡ್ ನಿವಾಸಿ ಕಿಶೋರ್ (48) ಎಂಬುವರು ದೂರು ಹೇಳಿಕೊಂಡಿದ್ದು, ಪೊಲೀಸರು ತನಿಖೆ ನಡೆಸಿದಾಗ ಇಂತಹ ಯಾವುದೇ ಪ್ರಕರಣ ನಡೆಯದೇ ಇರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ದೂರುದಾರನ ವಿರುದ್ಧವೇ ಪ್ರಕರಣ ದಾಖಲಾಗಿದೆ,.
