Connect with us

DAKSHINA KANNADA

RSS ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು, ವಿಹೆಚ್‌ಪಿ ಖಂಡನೆ

ಮಂಗಳೂರು : RSS ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು ಮಾಡಿರುವುದನ್ನು ವಿಹೆಚ್‌ಪಿ ತೀವ್ರವಾಗಿ  ಖಂಡಿಸಿದೆ.

ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ ಪ್ರಭಾಕರ ಭಟ್ ರವರ ಮೇಲೆ ಕೇಸು ದಾಖಲಿಸಿದ್ದು ಖಂಡನೀಯ, ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ಕೇಂದ್ರ ಸರಕಾರ ನೀಡಿದನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ, ಆದರೆ ಪ್ರಭಾಕರ್ ಭಟ್ ಮೇಲೆ ಕೇಸು ದಾಖಲಿಸುವ ಮೂಲಕ ಸಂಘ ಮತ್ತು ಹಿಂದೂ ಸಂಘಟನೆಗಳನ್ನು ಧಮನಿಸುವ ಸಂಚು ಇದಾಗಿದ್ದು, ಸಿದ್ದರಾಮಯ್ಯ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿದೆ .ಡಾ ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಹಾಕಿರುವ ಕೇಸನ್ನು ವಾಪಸು ಪಡೆಯಬೇಕೆಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪುವೆಲ್ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಸರಕಾರದ ದ್ವೇಷ ರಾಜಕಾರಣ ಮತ್ತು ಹಿಂದೂ ವಿರೋಧಿ ನೀತಿಯಿಂದ ಹಿಂದೂ ನಾಯಕರನ್ನು ಧಮನಿಸುವ ಕಾರ್ಯ ನಡೆಯುತ್ತಿದ್ದು, ಮಾನ್ಯ ಡಾ ಕಲ್ಲಡ್ಕ ಪ್ರಭಾಕರ ಭಟ್ ರವರ ವಿರುದ್ಧ ಸುಳ್ಳು ಕೇಸು ದಾಖಲಿಸಿ ಅವರನ್ನು ಧಮನಿಸುವ ಕಾರ್ಯ ನಡೆಸುತ್ತಿದ್ದು, ಹಿಂದೂ ವಿರೋಧಿ ಕೃತ್ಯವನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ತಕ್ಷಣ ಅವರ ಮೇಲೆ ಹಾಕಿರುವ ಸುಳ್ಳು ಕೇಸನ್ನು ವಾಪಸು ಪಡೆಯಲು ಅಗ್ರಹಿಸುತ್ತೇವೆಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷರಾದ ಹೆಚ್ ಕೆ ಪುರುಷೋತ್ತಮ ದತ್ತ ನಗರ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share Information
Continue Reading
Advertisement
Click to comment

Leave a Reply

Your email address will not be published. Required fields are marked *