LATEST NEWS
ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟ ಪ್ರಕರಣ: ವಿಚಾರಣೆಗೆ ಉಡುಪಿಗೆ ಬಂದ ಖುಷ್ಬೂ

ಉಡುಪಿ, ಜುಲೈ 26: ಇಲ್ಲಿನ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವೀಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಬುಧವಾರ ಸಂಜೆ ವೇಳೆ ಉಡುಪಿಗೆ ಆಗಮಿಸಿದ್ದಾರೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಪೊಲೀಸರನ್ನು ಭೇಟಿಯಾಗಿ ಎಫ್‌ಐಆರ್ ಸೇರಿದಂತೆ ಎಲ್ಲ ವಿಚಾರಗಳ ಕುರಿತು ಮಾಹಿತಿ ಪಡೆದುಕೊಳ್ಳುತ್ತೇನೆ. ನಾಳೆ ಕಾಲೇಜಿಗೆ ಭೇಟಿ ಕೊಟ್ಟು ಆಡಳಿತ ಮಂಡಳಿ, ಸಂತ್ರಸ್ತೆ ಮತ್ತು ಮೂವರು ವಿದ್ಯಾರ್ಥಿನಿಯರ ಜೊತೆ ಕೂಡ ಮಾತನಾಡುತ್ತೇನೆ. ನಂತರ ಮಾಧ್ಯಮಗಳಿಗೆ ವಿವರ ನೀಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಉಪಸ್ಥಿತರಿದ್ದರು.