LATEST NEWS
ಅಧಿಕ ಬಾಡಿಗೆ ದರ ವಸೂಲಿ – 16 ಆಟೋ ರಿಕ್ಷಾ ಚಾಲಕರ ಮೇಲೆ ಕೇಸ್

ಮಂಗಳೂರು ಎಪ್ರಿಲ್ 16: ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಪರಿಶೀಲನೆ ನಡೆಸಿದ ಮಂಗಳೂರು ಪೊಲೀಸರು 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಪೊಲೀಸರು ಪ್ರಯಾಣಿಕರ ಸೋಗಿನಲ್ಲಿ ಆಟೋರಿಕ್ಷಾದಲ್ಲಿ ಸಂಚರಿಸಿ ಪರಿಶೀಲಿಸಿದಾಗ ಅಧಿಕ ಬಾಡಿಗೆ ದರ ವಸೂಲಿ ಮಾಡುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
