Connect with us

    DAKSHINA KANNADA

    ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಜಾತಿನಿಂದನೆ ದೂರು

    ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಜಾತಿನಿಂದನೆ ದೂರು

    ಬೆಳ್ತಂಗಡಿ ಎಪ್ರಿಲ್ 10: ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ನಲಿಕೆಯವರ ಸಮಾಜ ಸೇವಾಸಂಘ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

    ಆರ್‌ ಎಸ್ಎಸ್ ಮುಖಂಡ ಪ್ರಭಾಕರ್ ಭಟ್ ಅವರ ಭೂತ ಕಟ್ಟುವವನಿಗೆ ತಲೆ ಸರಿ ಇಲ್ಲ ಎಂಬ ಹೇಳಿಕೆಗೆ ವಿರುದ್ದ ವಾಗಿ ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷ ಎಸ್. ಪ್ರಭಾಕರ್ ಶಾಂತಿಕೋಡಿಯವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜಾತಿ ನಿಂದನೆ ದೂರು ದಾಖಲಿಸಿದ್ದಾರೆ.

    ದೈವ ನರ್ತನೆಯಲ್ಲಿ ತೊಡಗಿಕೊಂಡಿರುವ ನಲಿಕೆ ಸಮಾಜದವರ ವಿರುದ್ದ ಕಲ್ಲಡ್ಕ ಪ್ರಭಾಕರ್ ಭಟ್ ನೀಡಿರುವ ಹೇಳಿಕೆ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ಪರಿಶಿಷ್ಟ ಜಾತಿಗೆ ಸೇರಿರುವ ನಲಿಕೆ ಸಮುದಾಯವನ್ನು ಅವಮಾನಗೈದು ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply