Connect with us

KARNATAKA

ಮಹಿಳಾ ಜನಪ್ರತಿನಿಧಿಗಳ ಬಗ್ಗೆ ಅವಹೇಳನಾಕಾರಿ ಪೋಸ್ಟ್- ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲು..!

ಮಹಿಳಾ ಜನಪ್ರತಿನಿಧಿಗಳ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಅರೋಪದಲ್ಲಿ ಹಿರಿಯ ಪತ್ರಕರ್ತ, ಸಂಪಾದಕ ವಿಶ್ವೇಶ್ವರ ಭಟ್‌ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ : ಮಹಿಳಾ ಜನಪ್ರತಿನಿಧಿಗಳ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ ಅರೋಪದಲ್ಲಿ ಹಿರಿಯ ಪತ್ರಕರ್ತ, ಸಂಪಾದಕ ವಿಶ್ವೇಶ್ವರ ಭಟ್‌ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶ್ವೇಶ್ವರ ಭಟ್‌ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾನೂನು ವಿಭಾಗದ ಉಪಾಧ್ಯಕ್ಷರಾದ ವಕೀಲ ಮಂಜುನಾಥ ನಾಯಕ್ ದೂರು ದಾಖಲಿಸಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ?
ಬಾಲಿವುಡ್ ನಟಿ ಮರ್ಲಿನ್ ಮನ್ರೋ ಹೇಳಿಕೆ ಉಲ್ಲೇಖಿಸಿ ಹೆಣ್ಣುಮಕ್ಕಳು ಯಾವ ಡ್ರೆಸ್ಸನ್ನೂ ಬಹಳ ದಿನಗಳ ಕಾಲ ಇಷ್ಟಪಡುವುದಿಲ್ಲ.ಅಂದರೆ ಟೈಟ್ ಡ್ರೆಸ್ಸನ್ನು ಯಾವತ್ತೂ ಧರಿಸುವುದಿಲ್ಲ.

ಆಗೊಮ್ಮೆ-ಈಗೊಮ್ಮೆ ಧರಿಸಿದಾಗ, ಮನೆಯಲ್ಲಿ’ಸದನ ಸದೃಶ’ವಾತಾವರಣ ನಿರ್ಮಿಸಬಾರದು.

ಕೆಲ ದಿನಗಳ ಬಳಿಕ ಮಗಳಿಗೆ ನೀವು ಅಂಥ ಡ್ರೆಸ್ ಧರಿಸು ಅಂದರೂ ಧರಿಸುವುದಿಲ್ಲ.ಅಷ್ಟಕ್ಕೂ ಆ ವಯಸ್ಸಿನ ಮಕ್ಕಳು ಟೈಟ್ ಡ್ರೆಸ್ ಧರಿಸಿದರೇ ಚೆಂದ.

ಇನ್ನು ಲಕ್ಷ್ಮೀ ಹೆಬ್ಬಾಳ್ಕರ್, ಮೋಟಮ್ಮ,ಮಮತಾ ಬ್ಯಾನರ್ಜಿ ಅಂಥ ಡ್ರೆಸ್ ಧರಿಸಿದರೆ ಬರಿಗಣ್ಣಿನಿಂದ ನೋಡಲು ಸಾಧ್ಯವಾ?ಎಂದು ವಿಶ್ವೇಶ್ವರ್‌ ಭಟ್‌ ತಮ್ಮ ಪೋಸ್ಟ್‌ ನಲ್ಲಿ ಬರೆದುಕೊಂಡಿದ್ದರು.

ವಿಶ್ವೇಶ್ವರ ಭಟ್ ಆಗಸ್ಟ್ 20 ರಂದು ಮಾಡಿದ್ದ ಫೇಸ್ಟುಕ್ ಪೋಸ್ಟ್ ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ‌, ಮೋಟಮ್ಮ ಮಮತಾ ಬ್ಯಾನರ್ಜಿಯವರ ಬಗ್ಗೆ ಅವಹೇಳನಕಾರಿ ಹಾಗೂ ಅಸಹ್ಯಕಾರಿ ಪೋಸ್ಟ್ ಮಾಡಿರುವ ಹಿನ್ನಲೆಯಲ್ಲಿ ಈ ಕೇಸ್ ದಾಖಲಾಗಿದೆ.

ಮಹಿಳೆಯರ ಬಿಗಿ ಉಡುಪಿನ ಬಗ್ಗೆ ಬರೆದಿದ್ದ ಲೇಖನದಲ್ಲಿ ಅನವಶ್ಯಕವಾಗಿ ಮಹಿಳಾ ನಾಯಕರನ್ನು ಉಲ್ಲೇಖಿಸಿ ಅವರಿಗೆ ಅವಮಾನಿಸಲಾಗಿದೆ ಎಂಬ ಆರೋಪ ಸದ್ಯ ವಿಶ್ವೇಶ್ವರ್ ಭಟ್ ಅವರ ಮೇಲಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *