Connect with us

DAKSHINA KANNADA

ಬಾಲಕನಿಗೆ ಯುವಕರ ತಂಡದಿಂದ ಹಲ್ಲೆ.. ಪ್ರಕರಣ ದಾಖಲಿಸಿದ ಪೊಲೀಸರು

ಬಾಲಕನಿಗೆ ಯುವಕರ ತಂಡದಿಂದ ಹಲ್ಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಾಲಕ

ವಿಟ್ಲ ಮೇ.28:ಯುವತಿಗೆ ಅಶ್ಲೀಲ ಮೇಸೆಜ್ ಕಳುಹಿಸಿದನ್ನು ಪ್ರಶ್ನಿಸಿ ಯುವಕರ ತಂಡವೊಂದು ಬಾಲಕನಿಗೆ ಹಲ್ಲೆ ನಡೆಸಿದ ವಿಡಿಯೋ ಒಂದು ಇಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾದ ಬಾಲಕ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.

ದಕ್ಷಿಣಕನ್ನಡ ಜಿಲ್ಲೆಯ ಸಾಲೆತ್ತೂರಿನಲ್ಲಿ ನಡೆದಿರುವ ಈ ಹಲ್ಲೆ ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಹಲ್ಲೆಗೊಳಗಾದ ಬಾಲಕ ತಡವಾಗಿ ಬಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಕನ್ಯಾನ ದಿನೇಶ್ ಹಾಗೂ ಮೂವರು ಬಾಲಕರ ವಿರುದ್ಧ ಜೀವ ಬೆದರಿಕೆ,ಹಲ್ಲೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾನೆ. ಈ ಹಲ್ಲೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿರುವ ವಿಟ್ಲ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರ ನೇತೃತ್ವದ ತಂಡವನ್ನು ರಚಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *