Connect with us

    LATEST NEWS

    ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಮೇಲೆ ಹಲ್ಲೆ – ಇಬ್ಬರು ಅರೆಸ್ಟ್

    ಮಂಗಳೂರು ಅಕ್ಟೋಬರ್ 09: ಕಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.


    ಬಂಧಿತರನ್ನು ಬಂಟ್ವಾಳ ತಾಲೂಕಿನ ನಿವಾಸಿ ಮೊಹಮ್ಮದ್ ಅತಾವುಲ್ಲಾ (40 ವರ್ಷ) ಹಾಗೂ ಮಾರ್ನಮಿಕಟ್ಟೆಯ ನಿವಾಸಿ ತೌಸೀರ್ ಅಲಿಯಾಸ್‌ ಪತ್ತೊಂಜಿ ತೌಸಿರ್ (31 ವರ್ಷ) ಎಂದು ಗುರುತಿಸಲಾಗಿದೆ.
    ನೇತ್ರಾವತಿ ನದಿಯಲ್ಲಿ ಪಾವೂರು ಉಳಿಯ ದ್ವೀಪದ ಬಳಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿ ಕಥೋಲಿಕ್ ಸಭಾ ನೇತೃತ್ವದಲ್ಲಿ ಸೆಪ್ಟೆಂಬರ್ 29ರಂದು ಪ್ರತಿಭಟನೆ ನಡೆದಿತ್ತು. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅಲ್ವಿನ್‌ ಅವರು ಸ್ಥಳಕ್ಕೆ ಮಾಧ್ಯಮದವರನ್ನು ಅಕ್ಟೋಬರ್ 5ರಂದು ಕರೆದೊಯ್ದಿದ್ದರು. ಈ ವೇಳೆ ಅಡ್ಯಾರ್ ಸೇತುವೆ ಬಳಿ ತಮ್ಮ ಮೇಲೆ ಹಲ್ಲೆ ನಡೆದಿದೆ ಎಂದು ಅಲ್ವಿನ್‌ ದೂರು ನೀಡಿದ್ದರು.


    ಆರೋಪಿ ಅತಾವುಲ್ಲಾ ಅಲ್ವಿನ್ ಅವರಿಗೆ ಅವಾಚ್ಯವಾಗಿ ಬೈದು ಹಲ್ಲೆಗೆ ಪ್ರಚೋದನೆ ನೀಡಿದ್ದ. ಆರೋಪಿ ತೌಸಿರ್ ಅವಾಚ್ಯವಾಗಿ ಬೈದು ಹಲ್ಲೆ ಮಾಡಿದ್ದ. ಆರೋಪಿಗಳ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply