Connect with us

    LATEST NEWS

    ಜಾಗರಣೆಗಾಗಿ ಸಿದ್ದಪಡಿಸಿದ್ದ ವೇದಿಕೆ ಕುಸಿದು ಮಹಿಳೆ ಸಾವು

    ನವದೆಹಲಿ ಜನವರಿ 28 : ಜಾಗರಣೆಗಾಗಿ ಭಕ್ತರಿಗೆ ಕೂರಲು ಸಿದ್ಧಪಡಿಸಿದ್ದ ವೇದಿಕೆ ಕುಸಿದು ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡ ಘಟನೆ ದೆಹಲಿಯ ಕಲ್ಕಾಜಿ ದೇಗುಲದಲ್ಲಿನಡೆದಿದೆ.


    ಘಟನೆಯಲ್ಲಿ 45 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಘಟನೆ ಸಂಭವಿಸಿದ ಕೂಡಲೇ ಮಹಿಳೆಯನ್ನು ಇಬ್ಬರು ವ್ಯಕ್ತಿಗಳು ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟುಹೊತ್ತಿಗಾಗಲೇ ಮಹಿಳೆ ಸಾವನ್ನಪ್ಪಿದ್ದರು. ಶುಕ್ರವಾರ ರಾತ್ರಿ ಅನುಮತಿ ಇಲ್ಲದೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ 1,600ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply