Connect with us

    DAKSHINA KANNADA

    ಡೆಂಗ್ಯೂ ಬಾದಿಸದಂತೆ ಎಚ್ಚರಿಕೆ ವಹಿಸಿ, ಅಧಿಕಾರಿಗಳಿಗೆ ಮೇಯರ್ ಸುಧೀರ್ ಶೆಟ್ಟಿ ಸೂಚನೆ

    ಮಂಗಳೂರು, ಸೆಪ್ಟೆಂಬರ್ 13: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಬಾದಿಸದಂತೆ ಎಚ್ಚರಿಕೆ ವಹಿಸಬೇಕಾಗಿರುವುದನ್ನು ಗಮನಿಸಿ ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಮುಂಜಾಗ್ರತ ಸಭೆ ಜರಗಿತು.

    ಸಭೆಯಲ್ಲಿ ಮಾತನಾಡಿದ ಮೇಯರ್ ರವರು ಮಲೇರಿಯಾ ಮತ್ತು ಡೆಂಗ್ಯೂಯನ್ನು ತಡೆಗಟ್ಟಲು ಮೊತ್ತ ಮೊದಲನೇಯದಾಗಿ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬೇಕು. ಪಾಲಿಕೆಯ ಎಂ.ಪಿ.ಡಬ್ಲ್ಯೂ ಕಾಯ೯ಕತ೯ರು ಮನೆ ಮನೆ ಭೇಟಿ ನೀಡಿ ಮನೆಯ ಸುತ್ತ ಮುತ್ತಲುನಲ್ಲಿರುವ ತ್ಯಾಜ್ಯ ಮತ್ತು ಯಾವುದೇ ಬಿಸಾಡುವಂತಹ ವಸ್ತುಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಎನ್ನುವ ಮಾಹಿತಿಯನ್ನು ಒದಗಿಸಿದರು.

    ಇದನ್ನು ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಸಾವ೯ಜನಿಕರು ತಮ್ಮ ತಮ್ಮ ಮನೆಯ ಸುತ್ತ ಮುತ್ತ ಸ್ವಚ್ಚವಾಗಿ ಇರಿಸಲು ಆಸಕ್ತಿ ವಹಿಸಿದರೆ ಉತ್ತಮ ಎಂದು ಸಲಹೆ ನೀಡಿದರು. ಇದರಿಂದ ಸೊಳ್ಳೆ ಉತ್ಪತ್ತಿಯನ್ನು ತಡೆಯಬಹುದಾಗಿದೆ ಎನ್ನುವ ಮಾಹಿತಿ ತಿಳಿಸಿದರು. ಪಾಲಿಕೆ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಈ ಡೆಂಗ್ಯೂ ಪ್ರಕರಣ ದಾಖಲಾಗಿದೆ.

    ಎಂ.ಪಿ.ಡಬ್ಲ್ಯೂ ಕಾಯ೯ಕತ೯ರು ಈ ಕುರಿತು ನಿಗಾವಹಿಸಿ ಸಾವ೯ಜನಿಕರಿಗೆ ಹರಿವು ಮೂಡಿಸಿ ಪಾಲಿಕೆಗೆ ಕೆಟ್ಟ ಹೆಸರು ಬಾರದ ಹಾಗೆ ಜಾಗ್ರತೆ ವಹಿಸಿ ಎಂದು ಕೇಳಿಕೊಂಡರು. ಸಭೆಯಲ್ಲಿ ಆರೋಗ್ಯ ಸ್ಥಾಯಿ ಸಮಿತಿಯ ಸದಸ್ಯರಾದ ಭರತ್ ಕುಮಾರ್ ಎಸ್, ತಾಲೂಕು ವೈದ್ಯಾಧಿಕಾರಿ ಡಾ| ನವೀನ್ ಕುಲಾಲ್, ಡಾ| ಸುಜಯ್ ಭಂಡಾರಿ, ಪಾಲಿಕೆಯ ಆರೋಗ್ಯ ಅಧಿಕಾರಿ ಡಾ| ಮಂಜಯ್ಯ ಶೆಟ್ಟಿ, ಪಾಲಿಕೆಯ ಆರೋಗ್ಯ ವಿಭಾಗದ ಎಂ.ಪಿ.ಡಬ್ಲ್ಯೂ ಮೇಲ್ವಿಚಾರಕರು, ಕಾಯ೯ಕತ೯ರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply