LATEST NEWS
ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿ ಕೊಬ್ಬು ಮಿಶ್ರಣ -ನಾಲ್ವರು ಸಿಬಿಐ ವಶಕ್ಕೆ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ತಿರುಮಲ ಫೆಬ್ರವರಿ 10: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸಿಬಿಐ ಬಂಧಿಸಿದೆ.
ಭೋಲೆ ಬಾಬಾ ಡೈರಿಯ ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್ (ರೂರ್ಕಿ, ಉತ್ತರಾಖಂಡ), ವೈಷ್ಣವಿ ಡೈರಿಯ (ಪೂನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (ದುಂಡಿಗಲ್) ಎಂಡಿ ರಾಜು ರಾಜಶೇಖರನ್ ಇವರುಗಳು ಲಡ್ಡು ಪ್ರಸಾದ ಕಲಬೆರಕೆ ಹಗರಣದಲ್ಲಿ ಬಂಧಿತರಾಗಿರುವ ಆರೋಪಿಗಳಾಗಿದ್ದಾರೆ. ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ಅಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತನಿಖಾ ತಂಡ ತಿಳಿಸಿದೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ ಎಸ್ಪಿ ಮುರಳೀರಾಂಬ, ವಿಶಾಖಪಟ್ಟಣಂ ಡಿಐಜಿ ಗೋಪಿನಾಥ್ ಜೆಟ್ಟಿ, ಗುಂಟೂರು ಐಜಿ ಸರ್ವಶ್ರೇಷ್ಠಿ ತ್ರಿಪಾಠಿ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿ ಸತ್ಯಕುಮಾರ್ ಪಾಂಡಾ ನೇತೃತ್ವದ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.