Connect with us

  KARNATAKA

  ಬೆಂಗಳೂರಿನ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ; ಸಿನಿಮಾ ನಟಿ, ಮಾಡೆಲ್ಸ್ ಭಾಗಿ..ಡ್ರಗ್ಸ್, ಕೊಕೇನ್ ಪತ್ತೆ

  ಬೆಂಗಳೂರು, ಮೇ 20: ನಗರದ ಎಲೆಕ್ಟ್ರಾನಿಕ್ ಸಿಟಿ ಹೊರಭಾಗದ ಸಿಂಗೇನಾ ಅಗ್ರಹಾರದ ಫಾರಂ ಹೌಸ್‍ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಮಾದಕ ವಸ್ತುಗಳು ಪತ್ತೆಯಾಗಿವೆ.

  ಪಾರ್ಟಿಯಲ್ಲಿ ತೆಲುಗು ನಟ-ನಟಿಯರು, ಮಾಡೆಲ್‍ಗಳು ಹಾಗೂ ಟೆಕ್ಕಿಗಳು ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ. ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯುವತಿಯರು ಕಂಡು ಬಂದರು. ತೆಲುಗು ನಟಿ (Telugu Actress) ಹೇಮಾ ಪಾರ್ಟಿಯಲ್ಲಿ ಭಾಗಿಯಾಗಿದ್ದುದು ಕಂಡುಬಂದಿದೆ. ಹೇಮಾ ಪವರ್​​ ಸಿನಿಮಾದಲ್ಲಿ ನಟಿ ತ್ರಿಶಾ ಅವರ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಕೆ ಈ ಪಾರ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

  ಕಾನ್ ಕಾರ್ಡ್ ಮಾಲೀಕ ಗೋಪಾಲ ರೆಡ್ಡಿ ಎಂಬವರಿಗೆ ಸೇರಿದ ಜಿ.ಆರ್‌ ಫಾರಂ ಹೌಸ್‍ನಲ್ಲಿ ಹೈದರಾಬಾದ್ ಮೂಲದ ವಾಸು ಎಂಬಾತ ರೇವ್ ಪಾರ್ಟಿ ಆಯೋಜಿಸಿದ್ದ. ಪಾರ್ಟಿಯಲ್ಲಿ ಆಂಧ್ರಪ್ರದೇಶ ಹಾಗೂ ಬೆಂಗಳೂರು (Bengaluru) ಮೂಲದ 100ಕ್ಕೂ ಅಧಿಕ ಮಂದಿ ಯುವಕ ಯುವತಿಯರಿದ್ದರು. ಖಚಿತ ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವಧಿ ಮೀರಿ ಪಾರ್ಟಿ ನಡೆದಿದ್ದಲ್ಲದೇ ಪಾರ್ಟಿಯಲ್ಲಿ ಎಂಡಿಎಂಎ, ಕೋಕೆನ್ ಸೇರಿ ಹಲವು ಮಾದರಿಯ ಮಾದಕ ವಸ್ತುಗಳು ಪತ್ತೆಯಾಗಿವೆ.

  ಸ್ಥಳದಲ್ಲಿದ್ದ ಬೆಂಜ್ ಕಾರಿನಲ್ಲಿ ಆಂಧ್ರದ ಎಂಎಲ್‍ಎ ಕಾಕನಿ ಗೋವರ್ಧನ ರೆಡ್ಡಿ ಎಂಬವರ ಹೆಸರಿನ ಪಾಸ್ ಪತ್ತೆಯಾಗಿದೆ. ಪಾರ್ಟಿಗೆ ಯುವಕರು ಜಾಗ್ವಾರ್ ಹಾಗೂ ಆಡಿ ಕಾರುಗಳಲ್ಲಿ ಬಂದಿದ್ದು, ಕೆಲವರನ್ನು ಹೈದರಾಬಾದ್‍ನಿಂದ ಕರೆಸಿಕೊಳ್ಳಲಾಗಿತ್ತು. ಸನ್ ಸೆಟ್ ಟು ಸನ್ ರೈಸ್ ಪಾರ್ಟಿ ಎಂಬ ಹೆಸರಿನಲ್ಲಿ ಪಾರ್ಟಿ ಆಯೋಜಿಸಲಾಗಿದ್ದು, ಭಾನುವಾರ ಸಂಜೆ 5 ಗಂಟೆಯಿಂದ ಬೆಳಗ್ಗೆ 6 ಗಂಟೆ ವರೆಗೂ ಪಾರ್ಟಿ ನಡೆಸಲು ಮುಂದಾಗಿದ್ದರು. ಪಾರ್ಟಿಗೆ ಸುಮಾರು 30 ರಿಂದ 50 ಲಕ್ಷ ರೂ. ಹಣ ಖರ್ಚು ಮಾಡಲಾಗಿದೆ ಎಂದು ತಿಳಿದು ಬಂದಿದೆ.

  Share Information
  Advertisement
  Click to comment

  You must be logged in to post a comment Login

  Leave a Reply