Connect with us

    FILM

    ಡ್ರಗ್ಸ್ ಕೇಸ್​; ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಬುಲಾವ್​​

    ಮಂಗಳೂರು : ಡ್ರಗ್ಸ್​ ಕೇಸ್​ ಪ್ರಕರಣ ಸಂಬಂಧ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿ ಸಮನ್ಸ್ ಜಾರಿ ಮಾಡಿದೆ. ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ಮಂಗಳೂರಿನ ಸಿಸಿಬಿ ಪೊಲೀಸರು ಖ್ಯಾತ ನಿರೂಪಕಿ ಅನುಶ್ರೀಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ಅವರನ್ನು ಬಂಧಿಸಿದ್ದರು.

    ಡ್ರಗ್ಸ್​ ರಾಕೆಟ್​ ಕೇಸ್​ನಲ್ಲಿ ಸ್ಫೋಟಕ ತಿರುವು ಪಡೆದಿದ್ದು, ನಿತ್ಯ ಹೊಸ-ಹೊಸ ಹೆಸರುಗಳು ಕೇಳಿಬರುತ್ತಿವೆ. ಡ್ಯಾನ್ಸರ್‌ ಕಿಶೋರ್ ಶೆಟ್ಟಿ ಬಂಧಿಸಿರುವ ಮಂಗಳೂರಿನ ಸಿಸಿಬಿ ಪೊಲೀಸರು ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಅನುಶ್ರೀ ಅವರಿಗೆ ವಾಟ್ಸಪ್‌ನಲ್ಲಿ ನೋಟಿಸ್‌  ಮಾಡಿರುವ ಸಿಸಿಬಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

    ಕಿಶೋರ್ ಅಮನ್ ಶೆಟ್ಟಿ ಆಪ್ತ ಸ್ನೇಹಿತ ತರುಣ್ ಅನುಶ್ರೀಯ ಜೊತೆ ಪಾರ್ಟಿ ಮಾಡಿದ್ದ. ವಿಚಾರಣೆಯ ಸಂದರ್ಭದಲ್ಲಿ ಈ ವಿಚಾರ ತಿಳಿಸಿದ್ದಕ್ಕೆ ಸಿಸಿಬಿಯಿಂದ ಅನುಶ್ರೀಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅನುಶ್ರೀಗೆ ಖುದ್ದು ನೋಟಿಸ್ ನೀಡಲು ಬೆಂಗಳೂರಿಗೆ ಸಿಸಿಬಿ ತಂಡ ಈಗ ಹೊರಟಿದೆ. ಈ ಮೂಲಕ ಖ್ಯಾತ ನಿರೂಪಕಿ ಅನುಶ್ರೀಗೂ ಸಂಕಷ್ಟ ಎದುರಾದಂತೆ ಆಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply