Connect with us

  LATEST NEWS

  ಸಿಸಿಬಿ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದ ತಲೆಮರೆಸಿಕೊಂಡಿದ್ದ ಆರೋಪಿಗಳು

  ಮಂಗಳೂರು ಫೆಬ್ರವರಿ 21: ಸಿಸಿಬಿ ಕಾರ್ಯಾಚರಣೆಯಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


  ಬಂಧಿತರಲ್ಲಿ ಒಬ್ಬ ಬರೋಬ್ಬರಿ 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೊಹಮ್ಮದ್ ಅಬ್ದುಲ್ ಫಯಾನ್(26). ಈತ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ವಿವಿಧ ಕಳವು, ಕೊಲೆಯತ್ನ, ಕಾರಗೃಹದಲ್ಲಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿದ ಪ್ರಕರಣಗಳು ಸೇರಿದಂತೆ ಸುಮಾರು 23 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ.

  ಮತ್ತೊಬ್ಬ ಆರೋಪಿ ಕುಖ್ಯಾತ ಡ್ರಗ್ಸ್ ಪೆಡ್ಲರ್ ಮೊಯಿದ್ದೀನ್ ಹಫೀಸ್ @ ಆಬಿ, ಈತ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ/ಸಾಗಾಟದ ಒಟ್ಟು 10 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ, ಈತನನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೀಂಜ ಎಂಬಲ್ಲಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.

  Share Information
  Advertisement
  Click to comment

  You must be logged in to post a comment Login

  Leave a Reply