LATEST NEWS
ದೀಪಕ್ ರಾವ್ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಬಂಧನ

ದೀಪಕ್ ರಾವ್ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿ ಬಂಧನ
ಮಂಗಳೂರು ಜುಲೈ 17 :ದೀಪಕ್ ರಾವ್ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಸುರತ್ಕಲ್ ನ ಕೃಷ್ಣಾಪುರ ನಿವಾಸಿ ಸಫ್ವಾನ್ ಅಲಿಯಾಸ್ ಚಪ್ಪು (23) ಎಂದು ಗುರುತಿಸಲಾಗಿದೆ.
ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಅರೋಪಿ ಸಫ್ವಾನ್ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ನಗರದ ಸುರತ್ಕಲ್ ನ ಮುಕ್ಕ ಬಳಿ ಮನೆಯೊಂದಲ್ಲಿ ಅಡಗಿದ್ದ ಆತನನ್ನು ದಾಳಿ ನಡೆಸಿ ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ದೀಪಕ್ ರಾವ್ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 13 ಕ್ಕೆ ಏರಿದೆ.

ಕಳೆದ ಜನವರಿಯ 3 ರಂದು ಮದ್ಯಾಹ್ನ 1:15 ರ ಹೊತ್ತಿಗೆ ಮಂಗಳೂರು ಕಾಟಿಪಳ್ಳ 2 ನೇ ಬ್ಲಾಕ್ ನ ಅಬ್ದುಲ್ ಮಜೀದ್ ಎಂಬವರ ಮನೆಯ ಎದುರು ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಎಂಬವರನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿತ್ತು.
ದೀಪಕ್ ರಾವ್ ಹತ್ಯೆ ಪ್ರಕರಣ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ದೀಪಕ್ ರಾವ್ ಕೊಲೆ ಪ್ರಕರಣ ರಾಜಕೀಯ ಆರೋಪ ಪ್ರತ್ಯಾರೋಪಕ್ಕೂ ಕಾರಣವಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಿದ್ದ ಪ್ರಕರಣದಲ್ಲಿ ಭಾಗಿಯಾದ 12 ಮಂದಿ ಆರೋಪಿಗಳನ್ನು ಬಂಧಿಸಿದ್ದರು.