Connect with us

    KARNATAKA

    ಚಿನ್ನ ವ್ಯಾಪಾರಿಯ ಅಕ್ರಮ ಜೂಜು ಅಡ್ಡೆ ಮೇಲೆ ಮುಗಿಬಿದ್ದ ಸಿಸಿಬಿ ಯಿಂದ 86.87 ಲಕ್ಷ ರೂ. ಜಪ್ತಿ..!

    ಬೆಂಗಳೂರು: ಚಿನ್ನದ ವ್ಯಾಪಾರಿಯ ಫ್ಲ್ಯಾಟ್‍ನಲ್ಲಿ ನಡೆಯುತ್ತಿದ್ದ ಅಕ್ರಮ ಜೂಜು ಅಡ್ಡೆ ಮೇಲೆ ಬೆಂಗಳೂರು ಸಿಸಿಬಿ ತಂಡ ಮುಗಿಬಿದ್ದಿದ್ದು ಆರು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

    ಜೂಜಾಟದ ಸ್ಥಳದಲ್ಲಿ ದಾಖಲೆ ಇಲ್ಲದ ರೂ 86.87 ಲಕ್ಷ ರೂ. ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಿನೇಂದ್ರ, ಮನೀಶ್, ಮುಕೇಶ್, ಲಲಿತ್, ರೋಹಿತ್ ಹಾಗೂ ಸಂಜಯ್ ಬಂಧಿತ ಆರೋಪಿಗಳಾಗಿದ್ದಾರೆ. ಜೆ.ಜೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸಿರ್ಸಿ ಸರ್ಕಲ್ ಬಳಿಯಿರುವ ಪಾರ್ಕ್ ವೆಸ್ಟ್ ಅಪಾರ್ಟ್‍ಮೆಂಟಿನಲ್ಲಿರುವ ರಾಜ್ ಜೈನ್ ಎಂಬಾತನ ಫ್ಲ್ಯಾಟ್‍ನಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಆಧಾರಿಸಿ ಸಿಸಿಬಿ ಈ ದಾಳಿ ನಡೆಸಿದೆ. ಮನೆ ಮಾಲಕ ರಾಜ್ ಜೈನ್ ಪೊಲೀಸ್ ಆಗಮಿಸುತ್ತಿದ್ದ ಸುಳಿವು ಸಿಕ್ಕಿ ಪರಾರಿಯಾಗಿದ್ದಾನೆ. ಚಿನ್ನದ ವ್ಯಾಪಾರಿಯಾಗಿರುವ ರಾಜ್ ಜೈನ್ ಈ ಹಿಂದೆ ಚಿನ್ನ ಕಳವಾಗಿದೆ ಎಂದು ಸುಳ್ಳು ದೂರು ನೀಡಿದ್ದನು. ತನಿಖೆ ಕೈಗೊಂಡಾಗ ರಾಜ್ ಜೈನ್ ಕೃತ್ಯ ಬಯಲಾಗಿತ್ತು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

     

    Share Information
    Advertisement
    Click to comment

    Leave a Reply

    Your email address will not be published. Required fields are marked *