ವಿಟ್ಲಪೇಟೆಯಲ್ಲಿ ನಡೆದ ಅಪಘಾತದ ಸಿಸಿಟಿವಿ ದೃಶ್ಯ

ಪುತ್ತೂರು ಮಾರ್ಚ್ 11: ಕಾರ್ ಮತ್ತು ಬೈಕ್ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ವಿಟ್ಲದಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ವಿಟ್ಲ ಪೇಟೆಯ ಪೆಟ್ರೋಲ್ ಬಂಕ್ ಬಳಿ ಘಟನೆ ನಡೆದಿದ್ದು, ಅಫಘಾತ ನಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್ ಸವಾರ ಅಡ್ಡ ರಸ್ತೆಯಿಂದ ನೇರವಾಗಿ ಮುಖ್ಯರಸ್ತೆಗೆ ನುಗ್ಗಿಸಿದ್ದರಿಂದ ಘಟನೆ ನಡೆದಿದ್ದು ಎದುರುಗಡೆಯಿಂದ ಬಂದ ಕಾರ್ ಗೆ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VIDEO

4 Shares

Facebook Comments

comments